ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಚಿತ್ರ ‘ಹಮಾರೆ ಬಾರಹ್’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ.
ಇಸ್ಲಾಂ ಮತ್ತು ಮುಸ್ಲಿಮರನ್ನು ಋಣಾತ್ಮಕವಾಗಿ ಚಿತ್ರಿಸಲಾಗಿದೆ ಎಂದು ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಲಾಗಿತ್ತು. ಈಗ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ನಿರ್ಮಾಪಕರು ಒಪ್ಪಿದ ಬಳಿಕ ನ್ಯಾ. ಬಿಪಿ ಕೊಲಬಾವಾಲಾ ಮತ್ತು ನ್ಯಾ. ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠದಿಂದ ಸಿನಿಮಾ ಬಿಡುಗಡೆಗೆ ಆದೇಶ ನೀಡಿದೆ. ಇದೀಗ ಜೂನ್ 21ರಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
ಇತ್ತೀಚೆಗೆ ಚಿತ್ರವು ಇಸ್ಲಾಂ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿದೆ ಬಿಂಬಿಸಿದೆ ಎಂದು ಆರೋಪಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್ಗೆ ಸುಪ್ರೀಂ ಸೂಚಿಸಿತ್ತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ರಜಾಕಾಲದ ಪೀಠವು, ಜೂ.14ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು.