ಸ್ಪೀಕರ್, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಬಾಂಬೆ ಹೈಕೋರ್ಟ್​ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹಾಗೂ ಉದ್ಧವ್ ಠಾಕ್ರೆ(Uddhav Thackeray) ಬಣದ 14 ಶಾಸಕರ ವಿರುದ್ಧ ಬಾಂಬೆ ಹೈಕೋರ್ಟ್​ ನೋಟಿಸ್​ ಜಾರಿಮಾಡಿದೆ.

ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರವನ್ನು ಏಕನಾಥ್ ಶಿಂಧೆ(Eknath Shinde) ಬಣದ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಈ ಸಂಬಂಧ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನ್ಯಾಯಾಲಯ ಬುಧವಾರ ನೋಟಿಸ್ ಜಾರಿ ಮಾಡಿದೆ. ಪೀಠವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ನಿಗದಿಪಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!