ಹೊಸದಿಗಂತ ಡಿಜಿಟಲ್ ಡೆಸ್ಕ್:
ಡ್ರಗ್ಸ್ ಪ್ರಕರಣ ಸಂಬಂಧ ಆರ್ಯನ್ ಖಾನ್ , ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚಾ ಜಾಮೀನು ಅರ್ಜಿ ವಿಚಾರಣೆ ಇಂದು ಬಾಂಬೆ ಹೈಕೋರ್ಟ್ನಲ್ಲಿ ನಡೆದಿದೆ. ದೀರ್ಘ ವಿಚಾರಣೆ ನಂತರ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ (ಅಕ್ಟೋಬರ್ 28) ಮುಂದೂಡಲಾಗಿದೆ.
ವಕೀಲ ಅಲಿ ಕಾಶಿಫ್ ಖಾನ್ ದೇಶಮುಖ್ ಮತ್ತು ಹಿರಿಯ ವಕೀಲ ಅಮಿತ್ ದೇಸಾಯಿ ಬುಧವಾರ ತಮ್ಮ ವಾದವನ್ನು ಮುಕ್ತಾಯಗೊಳಿಸಿದ ನಂತರ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿದ್ದಾರೆ.
ಆರ್ಯನ್ ಪರ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರ್ಯನ್ ಖಾನ್ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಯಾವ ಕಾರಣಕ್ಕೆ ಬಂಧನವೆಂದು ತಿಳಿದುಕೊಳ್ಳುವ ಹಕ್ಕಿದೆ. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್ಸಿಬಿ ದಾರಿ ತಪ್ಪಿಸಿದೆ’ ಎಂದು ವಾದ ಮಂಡನೆ ಮಾಡಿದರು.
ಕೋರ್ಟ್ನಲ್ಲಿ ಅರ್ಬಾಜ್ ಪರ ವಕೀಲ ಅಮಿತ್ ದೇಸಾಯಿ ವಾದಮಂಡನೆ ಮಾಡಿದ್ದಾರೆ. ‘ಅಕ್ಟೋಬರ್ 3ರಂದು ಮೂವರನ್ನು ಬಂಧಿಸಲಾಗಿದೆ. ಸಣ್ಣ ಪ್ರಮಾಣದ ಡ್ರಗ್ಸ್ ಪತ್ತೆ, ಸೇವನೆ ಬಗ್ಗೆ ಆರೋಪ ಇದೆ. ಇದು 1 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣ. ಆದ್ರೆ 41ಎ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಅಕ್ಟೋಬರ್ 3ರಂದು ಮೂವರ ಬಂಧನ ಕಾನೂನುಬಾಹಿರ’ ಎಂದು ವಕೀಲರು ವಾದ ಮಂಡಿಸಿದರು.