Sunday, October 12, 2025

ಮೊದಲು 60 ಕೋಟಿ ಪಾವತಿಸಿ…ಶಿಲ್ಪಾ ಶೆಟ್ಟಿ ವಿದೇಶಿ ಪ್ರಯಾಣಕ್ಕೆ ಬಾಂಬೆ ಹೈಕೋರ್ಟ್ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಂಚನೆ ಪ್ರಕರಣ ಸಂಬಂಧ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್‌ ಕುಂದ್ರಾ ಗೆ ಯೂಟ್ಯೂಬ್ ಕಾರ್ಯಕ್ರಮಕ್ಕಾಗಿ ಕೊಲಂಬೊಗೆ ಪ್ರಯಾಣಿಸಲು ಬುಧವಾರ ಬಾಂಬೆ ಹೈಕೋರ್ಟ್ ಅನುಮತಿ ನಿರಾಕರಿಸಿದ್ದು, ಈ ವಿಷಯವನ್ನು ಪರಿಗಣಿಸುವ ಮೊದಲು ಅವರು 60 ಕೋಟಿ ರೂಪಾಯಿ ಪಾವತಿಸಬೇಕು ಎಂದು ಆದೇಶಿಸಿದೆ.

ದಂಪತಿ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ (EOW) ಹೊರಡಿಸಿದ ಲುಕ್ ಔಟ್ ಸುತ್ತೋಲೆ (LOC) ಜಾರಿಯಲ್ಲಿದೆ ಎಂದು ನ್ಯಾಯಾಲಯ ಗಮನಿಸಿದ್ದು, ಈ ಕಾರಣದಿಂದಾಗಿ, ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಅನುಮತಿಯಿಲ್ಲದೆ ಅವರು ವಿದೇಶ ಪ್ರವಾಸ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಅಕ್ಟೋಬರ್ 25 ರಿಂದ 29 ರವರೆಗೆ ಕೊಲಂಬೊದಲ್ಲಿ ನಡೆಯಲಿರುವ ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಶಿಲ್ಪಾ ಶೆಟ್ಟಿ ಭಾಗವಹಿಸಬೇಕಾಗಿತ್ತು ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಆದಾಗ್ಯೂ, ನ್ಯಾಯಾಲಯವು ವಿನಂತಿಯನ್ನು ತಿರಸ್ಕರಿಸಿತು ಮತ್ತು ಪ್ರಯಾಣ ಅನುಮತಿ ಪಡೆಯುವ ಮೊದಲು ವಂಚನೆ ಆರೋಪಕ್ಕಾಗಿ ದಂಪತಿ, ಮೊದಲು 60 ಕೋಟಿ ರೂಪಾಯಿಗಳನ್ನು ಪಾವತಿಸಬೇಕು ಎಂದು ಹೇಳಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 14 ಕ್ಕೆ ನಿಗದಿಪಡಿಸಲಾಗಿದೆ.

ಕಳೆದ ವಾರವೂ ಸಹ, ಬಾಂಬೆ ಹೈಕೋರ್ಟ್ ಶೆಟ್ಟಿ ಮತ್ತು ಕುಂದ್ರಾ ಅವರ ವಿರುದ್ಧ ಗಂಭೀರ ಪ್ರಕರಣಗಳು ಬಾಕಿ ಇವೆ ಎಂದು ಉಲ್ಲೇಖಿಸಿ ಥೈಲ್ಯಾಂಡ್‌ನ ಫುಕೆಟ್‌ಗೆ ಪ್ರಯಾಣಿಸಲು ಅನುಮತಿ ನಿರಾಕರಿಸಿತು.

error: Content is protected !!