ಶಾಲೆಗಳಿಗೆ ಬಾಂಬ್‌ ದಾಳಿ ಬೆದರಿಕೆ: ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಕರ್ನಾಟಕ, ದೆಹಲಿ, ಗುಜರಾತ್‌ ಸೇರಿ ದೇಶದ ಹಲವೆಡೆ ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ದಾಳಿ ಬೆದರಿಕೆಗಳು ಬರುತ್ತಿದ್ದು, ಹೀಗಾಗಿ , ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ದೆಹಲಿ, ಅಹಮದಾಬಾದ್‌ ಸೇರಿ ಹಲವೆಡೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಿದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯವು, ಈ ಕುರಿತು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿದೆ.

ಅದರಲ್ಲೂ, ಈ ಕುರಿತು ದೆಹಲಿ ಪೊಲೀಸರು ತಪ್ಪು ಮಾಹಿತಿ ತಡೆದು, ಅನಗತ್ಯ ಆತಂಕವನ್ನು ನಿವಾರಿಸಲು ದೆಹಲಿ ಪೊಲೀಸರು ಹಾಗೂ ಶಾಲೆಗಳ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಶಾಲೆಗಳಲ್ಲಿ ಸಿಸಿಟಿವಿಗಳ ಅಳವಡಿಕೆ, ಅವುಗಳ ಮೇಲೆ ನಿಗಾ ಇರಿಸುವುದು, ಶಾಲೆಗಳ ಇ-ಮೇಲ್‌ ವಿಳಾಸಗಳನ್ನು ಪದೇಪದೆ ಪರಿಶೀಲಿಸುವುದು ಸೇರಿ ಹಲವು ಸೂಚನೆಗಳನ್ನು ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಪೊಲೀಸ್‌ ಆಯುಕ್ತರು ಸಭೆ ನಡೆಸಿ, ಹುಸಿ ಬಾಂಬ್‌ ಬೆದರಿಕೆ ಕರೆ, ಇ-ಮೇಲ್‌ಗಳನ್ನು ನಿಯಂತ್ರಿಸುವ ಕ್ರಮಗಳ ಕುರಿತು ಚರ್ಚಿಸಿದ ಬಳಿಕ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!