March 15, 2026
Sunday, March 15, 2026
spot_img

ಗದಗ–ಯಲವಿಗಿ ರೈಲು ಯೋಜನೆ ಶೀಘ್ರ ಆರಂಭವಾಗಲಿ: ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕರ್ನಾಟಕದ ರೈಲು ಸಂಪರ್ಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಗದಗ–ಯಲವಿಗಿ ರೈಲು ಮಾರ್ಗ ಯೋಜನೆಗೆ ತ್ವರಿತ ಅನುಮತಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿರುವುದರಿಂದ, ಡಿಪಿಆರ್‌ಗೆ ಕೂಡಲೇ ಅನುಮೋದನೆ ನೀಡಿದರೆ 2026ರಲ್ಲೇ ಕಾಮಗಾರಿ ಆರಂಭಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಈ ಯೋಜನೆ ಮುಂದುವರಿಯಲು ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಶೀಘ್ರವಾಗಿ ಕೈಗೊಳ್ಳಬೇಕೆಂದು ಈಗಾಗಲೇ ಮನವಿ ಮಾಡಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ, ಹಲವು ವರ್ಷಗಳಿಂದ ಬಾಕಿಯಿರುವ ಶಿವಮೊಗ್ಗ–ರಾಣೆಬೆನ್ನೂರು ರೈಲು ಮಾರ್ಗದ ಭೂಸ್ವಾಧೀನ ಕಾರ್ಯವನ್ನು ಕೂಡ ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಗದಗ–ಕುಷ್ಟಗಿ ಹೊಸ ರೈಲು ಮಾರ್ಗದ ಬೇಡಿಕೆಯನ್ನು ಕೂಡ ಮುಂದಿರಿಸಿ, ನರೇಗಲ್ ಹಾಗೂ ಗಜೇಂದ್ರಗಢ ಮಾರ್ಗವಾಗಿ ಸಾಗುವ ಈ ಯೋಜನೆಗೆ ತಕ್ಷಣ ಸಮೀಕ್ಷೆ ನಡೆಸಿ ಜಾರಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರನ್ನು ಅವರು ವಿನಂತಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !