ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಿಂದ ಮುಂದಿನ ಮಳೆಗಾಲದಲ್ಲಿ ಬಯಲುಸೀಮೆಗೆ ನೀರು ಹರಿಸುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
2022-23ನೇ ಸಾಲಿನ ಬಜೆಟ್‌ನಲ್ಲಿ ಯೋಜನೆಗೆ 3000 ಕೋಟಿ ರೂ. ಒದಗಿಸಲಾಗಿದೆ. ಮೊದಲ ಹಂತದ ಕಾಮಗಾರಿ ಪ್ರಸ್ತುತ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗುವುದು.
ಯೋಜನೆಯ ಎರಡನೇ ಹಂತ 260 ಕಿ.ಮೀ. ಉದ್ದದ ಗುರುತ್ವ ಕಾಲುವೆ, ಟಿ.ಜಿ. ಹಳ್ಳಿ- ರಾಮನಗರ ಫೀಡರ್, ಮಧುಗಿರಿ ಫೀಡರ್ ಕಾಲುವೆ ಗೌರಿ ಬಿದನೂರು ಫೀಡರ್ ಕಾಲುವೆ ಕಾಮಗಾರಿಗಳನ್ನು ಪ್ರಸ್ತುತ ಸಾಲಿನಲ್ಲಿ ಪೂರ್ಣಗೊಳಿಸಿ ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರಗಿಸಲು ಹಾಗೂ ಯೋಜನೆಯ ಉಳಿಕೆ ಕಾಮಗಾರಿಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.