August 20, 2026
Thursday, August 20, 2026
spot_img

ಬಜೆಟ್‌ಗೂ ಮುನ್ನವೇ ಸರ್ಕಾರ ಹಣಕಾಸು ನಿಯಮ ಉಲ್ಲಂಘನೆ ಮಾಡಿದೆ ಎಂದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಜೆಟ್‌ಗೂ ಮುನ್ನವೇ ರಾಜ್ಯ ಸರ್ಕಾರ ಹಣಕಾಸಿನ ಜವಾಬ್ದಾರಿ ಕಾಯ್ದೆಯ ಅನ್ವಯ ಸ್ಥಾಪಿತವಾದ ಹಣಕಾಸಿನ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯದ ಒಟ್ಟು ಸಾಲಗಳು ಈಗ ಒಟ್ಟು ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ನಿರ್ಣಾಯಕ ಶೇ.25ರಷ್ಟು ಮಿತಿಯನ್ನು ಮೀರಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಸಾಲದ ಹೊರೆಯ ನಿಜವಾದ ಪ್ರಮಾಣವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಅತಿಯಾದ ಖರ್ಚುಗಳು, ಅರ್ಥವಿಲ್ಲದ ವೆಚ್ಚಗಳು ಹೆಚ್ಚುತ್ತಿರುವ ಸಾಲಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.

ಅಂದಾಜು ಎಂಟು ಲಕ್ಷ ಕೋಟಿ ರೂಪಾಯಿಯಲ್ಲಿ ಸಿದ್ದರಾಮಯ್ಯ ಸರ್ಕಾರದಿಂದ ಐದು ಲಕ್ಷ ಕೋಟಿ ರೂಪಾಯಿ ಮಾತ್ರ ಭರ್ತಿ ಆಗಿದೆ. ಭವಿಷ್ಯದಲ್ಲಿ ನಮಗೆ ಸಮಸ್ಯೆ ಆಗಲಿದೆ ಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !