Thursday, March 23, 2023

Latest Posts

ಕನ್ನಡ ಚಲನಚಿತ್ರ ನಿರ್ದೇಶಕ ಎಸ್ ಕೆ ಭಗವಾನ್ ನಿಧನ : ಬೊಮ್ಮಾಯಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (89)ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಟ್ವಿಟ್ಟರ್‌ ನಲ್ಲಿ ಬೊಮ್ಮಾಯಿ,”ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌ಕೆ ಭಗವಾನ್ ಅವರ ನಿಧನದ ಸುದ್ದಿ ಕೇಳಿ ನನಗೆ ತುಂಬಾ ನೋವಾಯಿತು. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ನಲ್ಲಿ, “ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು. ಓಂ ಶಾಂತಿಃ” ಎಂದು ಬರೆದಿದ್ದಾರೆ.

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯನ್ನು ಭಗವಾನ್ ಅವರು ಎದುರಿಸುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಡಾ. ಸಿ.ಎನ್. ಮಂಜುನಾಥ್ ಹೇಳಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಭಗವಾನ್ ಅವರು ಇಹಲೋಕ ತ್ಯಜಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!