Sunday, October 5, 2025

ಬೂದಿಗೆರೆ ಕ್ರಾಸ್ ಹಿಟ್ ಅಂಡ್ ರನ್ ಪ್ರಕರಣ: ಟಿಪ್ಪರ್ ಚಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ಬೂದಿಗೆರೆ ಕ್ರಾಸ್ ಬಳಿ ಕೆಲವು ದಿನಗಳ ಹಿಂದೆ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಇದೀಗ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದ್ದು, ಅಪಘಾತದ ಬಳಿಕ ಪರಾರಿಯಾಗಿದ್ದನು.

ಅಕ್ಟೋಬರ್ 29ರ ಬೆಳಗ್ಗೆ 8:50ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆದ ವಿದ್ಯಾರ್ಥಿನಿ ಧನುಶ್ರೀ (21) ರಸ್ತೆ ಮೇಲೆ ಬಿದ್ದಾಗ, ಆಕೆಯ ಮೇಲೆ ಟಿಪ್ಪರ್ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಳು.

ಘಟನೆಯ ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಟಿಪ್ಪರ್ ಪತ್ತೆ ಹಚ್ಚಿ, ಕೊನೆಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಬಹು ಚರ್ಚೆಗೆ ಕಾರಣವಾಗಿದ್ದ ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.