March 6, 2026
Friday, March 6, 2026
spot_img

ಉತ್ತರ ಕರ್ನಾಟಕದ ಹೈನುಗಾರಿಕೆಗೆ ಉತ್ತೇಜನ : ಕುರಿ, ಮೇಕೆ ಸಾಕಾಣಿಕೆ ಪ್ರೋತ್ಸಾಹಿಸಲು 40 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಈ ಬಾರಿ ರಾಜ್ಯ ಸರ್ಕಾರ 40 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.

ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಮತ್ತು ಹಸು, ಎಮ್ಮೆ ಖರೀದಿಗೆ ತಲಾ ಶೇ.25 ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಈ ಯೋಜನೆಯಡಿ 20 ಸಾವಿರ ಫಲಾನುಭವಿಗಳಿಗೆ ನೆರವು ದೊರೆಯಲಿದೆ.
ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ ಸೇವೆ ವ್ಯವಸ್ಥೆಯನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಪ್ರಸಕ್ತ ಸಾಲಿನಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದಜೇಗೇರಿಸಲು 10 ಕೋಟಿ ರೂ. ಅನುದಾನ ತೆಗೆದಿರಿಸಿದೆ.

ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.

ಜಾನುವಾರುಗಳ ಸಿಟಿ ಸ್ಕ್ಯಾನಿಂಗ್‌:

ಪಶುಗಳಲ್ಲಿ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಪ್ರಥಮವಾಗಿ ಬೆಂಗಳೂರು ಹಾಗೂ ಬೀದರ್‌ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಆಯವ್ಯಯದಲ್ಲಿ ಮಂಡಿಸಿದ್ದಾರೆ.

ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರೋಪಾಯವಾಗಿ ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ಉದ್ದೇಶದಿಂದ ಪಶುವೈದ್ಯರು ಮತ್ತು ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲು ಬೆಂಗಳೂರು ಹಾಗೂ ಬೀದರ್ ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !