ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಪ್ರತಿ ಡೋಸ್​ಗೆ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದ ಎಲ್ಲ ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟ ಎಲ್ಲ ವಯಸ್ಕರರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಈಗಾಗಲೇ ಪ್ರಕಟಣೆ ಹೊರಡಿಸಿದ್ದು, ಸೀರಂ ಇನ್​​​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಒ ಆದರ್ ಪೂನಾವಾಲ್​ ಪ್ರತಿ ಬೂಸ್ಟರ್ ಲಸಿಕೆಗೆ 600 ರೂ. ದರ ನಿಗದಿ ಮಾಡಿದ್ದರು. ಇದೀಗ ಬೆಲೆಯಲ್ಲಿ ಗಣನೀಯವಾದ ಇಳಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಮಾತುಕತೆ ಬಳಿಕ ಕೋವಿಶೀಲ್ಡ್ ಬೂಸ್ಟರ್ ಬೆಲೆಯಲ್ಲಿ 600ರ ಬದಲಾಗಿ 225 ರೂ. ಎಂದು ಘೋಷಿಸಲಾಗಿದೆ. ಖುದ್ದಾಗಿ ಆದರ್​ ಪೂನಾವಾಲ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನು ಕೋವ್ಯಾಕ್ಸಿನ್​ ಬೆಲೆಯಲ್ಲೂ ಇಳಿಕೆ ಮಾಡಲಾಗಿದೆ. 1200ರ ಬದಲಾಗಿ ಪ್ರತಿ ಡೋಸ್​ಗೆ 225 ರೂ.ಗೆ ಮಾರಾಟ ನಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭಾರತ್ ಬಯೋಟೆಕ್​​ ಸಂಸ್ಥೆಯ ಮುಖ್ಯಸ್ಥೆ ಸುಚಿತ್ರಾ ಎಲ್ಲಾ ಟ್ವೀಟ್ ಮಾಡಿದ್ದಾರೆ.
ನಾಳೆಯಿಂದ ದೇಶದ ಎಲ್ಲ ಖಾಸಗಿ ಆಸ್ಪತ್ರೆಯ ಕೋವಿಡ್ ಸೆಂಟರ್​ಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಅದಕ್ಕಾಗಿ ಕೋವಿಡ್​ನ 2ನೇ ಡೋಸ್ ಪಡೆದು 9 ತಿಂಗಳ ನಂತರ ಈ ಲಸಿಕೆ ಪಡೆದುಕೊಳ್ಳಬೇಕಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!