ಏಪ್ರಿಲ್ 10ರಿಂದ ಬೂಸ್ಟರ್ ಡೋಸ್: ಕೋವಿಶೀಲ್ಡ್ ಲಸಿಕೆಗೆ ದರ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಪ್ರಿಲ್ 10ರಿಂದ ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೂ ಬೂಸ್ಟರ್ ಡೋಸ್ ನೀಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಘೋಷಿಸಿದ್ದು, ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಗಾಗಿ ಸೀರಂ ಇನ್ಟಿಟ್ಯೂಟ್ ಬೂಸ್ಟರ್ ಡೋಸ್ ಲಸಿಕೆಗೆ ರೂ.600ರ ದರ ನಿಗದಿ ಪಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವಂ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ಅವರು, ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದು, ಕೋವಿಶೀಲ್ಡ್ ಬೂಸ್ಟರ್ ಡೋಸ್ ಗಳು 600ಕ್ಕೆ ಲಭ್ಯವಾಗಲಿವೆ. ಕೋವಿಶೀಲ್ಡ್ ‘ಮುಂಜಾಗ್ರತಾ’ ಡೋಸ್ ಗಳ ಬೆಲೆ 600 ಪ್ಲಸ್ ತೆರಿಗೆ, ಅನುಮೋದನೆ ಪಡೆದ ನಂತರ ತೆರಿಗೆ ಬಗ್ಗೆ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!