ಗಡಿ ವಿವಾದ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ ಎಂದ ಸಂಜಯ್ ರಾವತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ವಿರುದ್ಧ ರಾಜಕೀಯ ನಾಯಕರ ಆರೋಪ ಮತ್ತು ಪ್ರತ್ಯಾರೋಪಗಳು ಜೋರಾಗಿವೆ. ಶಿವಸೇನೆ(ಉದ್ಧವ್ ಠಾಕ್ರೆ) ನಾಯಕ ಸಂಜಯ್ ರಾವತ್, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಅಶಕ್ತವಾಗಿದೆ. ಎಲ್ಲ ಕಡೆಯಿಂದಲೂ ವೈಫಲ್ಯವನ್ನು ಕಾಣುತ್ತಿದೆ. ಪ್ರತಿ ದಾಳಿಯನ್ನು ನಡೆಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಜತೆಗೇ ಮಹಾರಾಷ್ಟ್ರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈವರೆಗೂ ಕರ್ನಾಟಕದ ಯಾವುದೇ ಮುಖ್ಯಮಂತ್ರಿಯು ಸೋಲಾಪುರ ಮತ್ತು ಸಾಂಗ್ಲಿ ಜಿಲ್ಲೆಯ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿರಲಿಲ್ಲ ಎಂದು ರಾವತ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!