ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಹಾರಾಷ್ಟ್ರದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಮಾತುಕತೆ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳುತ್ತೇವೆ. ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಸಮಸ್ಯೆ ಬಗೆಹರಿಸಿಲ್ಲ. ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದವನ್ನು ಪರಿಹರಿಸಿಲ್ಲ. ಆದರೆ, ನಮ್ಮ ಸರ್ಕಾರ ಎಲ್ಲಾ ಯೋಜನೆಗಳನ್ನು ಆರಂಭಿಸಿದೆ ಎಂದು ಹೇಳಿದ್ದಾರೆ.