ಗಡಿ ವಿವಾದ: ಮಹಾ ಸಚಿವರನ್ನು ರಾಜ್ಯಕ್ಕೆ ಬರಲು ಬಿಡಲ್ಲ ಎಂದ ಸಚಿವ ಅಶೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನೇ ದಿನೇ ತಾರಕಕ್ಕೇರುತ್ತಿದ್ದು, ಇದರ ನಡುವೆ ನಾಳೆ ಮಹಾರಾಷ್ಟ್ರ ಸಚಿವರು ಗಡಿ ಜಿಲ್ಲೆ ಬೆಳಗಾವಿಗೆ ಬರಲು ಸಿದ್ಧತೆ ನಡೆಸಿದ್ದು, ಆದ್ರೆ ಯಾವುದೇ ಕಾರಣಕ್ಕೂ ಮಹಾ ಸಚಿವರು ರಾಜ್ಯ ಪ್ರವೇಶಿಸಲು ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂಪುಟದ ಇಬ್ಬರು ಸಚಿವರು ನಾಳೆ ಬೆಳಗಾವಿಗೆ ಬರಲು ಮುಂದಾಗಿದ್ದಾರೆ. ಯಾವ ಕಾರಣಕ್ಕೂ ರಾಜ್ಯಕ್ಕೆ ಬರಲು ಬಿಡುವುದಿಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಎಂಇಎಸ್ ವರ್ಚಸ್ಸು ಕಡಿಮೆಯಾಗುತ್ತಿದ್ದಂತೆ ಈ ರೀತಿ ಮಾಡುತ್ತಿದ್ದಾರೆ. ಅವರಿಗೆ ಇವೆಂಟ್ ಇಲ್ಲದಾಗ ಗಡಿ ಕ್ಯಾತೆ ನೆನಪಾಗುತ್ತೆ. ಮಹಾಜನ್ ವರದಿಯೇ ಅಂತಿಮ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸ್ಪಷ್ಟವಾಗಿದೆ. ದಾಖಲೆ ಜನಾಭಿಪ್ರಯವೂ ನಮ್ಮ ಕಡೆ ಇದೆ. ಸಚಿವರು ಗಡಿ ಪ್ರವೇಶಿಸಲು ಅವಕಾಶ ಕೊಡುವುದುದಿಲ್ಲ ಎಂದು ಹೇಳಿದರು.

ಇದೆಲ್ಲ ಎಲೆಕ್ಷನ್ ಸ್ಟಂಟ್. ಯಾರೂ ಬೆಲೆ ಕೊಡಲ್ಲ. ಮಹಾರಾಷ್ಟ್ರದಿಂದ ಬರುವ ಸಚಿವರು ಸ್ಟಂಟ್ ಮಾಸ್ಟರ್ಸ್. ಸವಾಲಿಗೆ ಪ್ರತಿಸವಾಲು ಎನ್ನುವುದಾದರೆ ನಾವೂ ಮಾಡುತ್ತೇವೆ. ಯಾವುದೇ ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!