ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ | ಒಂದು ದಿನ ಮುಂಚೆಯೇ ಪ್ಲೇಯಿಂಗ್ 11 ಘೋಷಿಸಿದ ಆಸ್ಟೇಲಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಡಿಲೇಡ್​ನ ಓವಲ್ ಮೈದಾನದಲ್ಲಿ ಶುಕ್ರವಾರದಿಂದ ಶುರುವಾಗಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಆಸೀಸ್ ಪಡೆಯಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ಸ್ಕಾಟ್ ಬೋಲ್ಯಾಂಡ್​ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಪರ್ತ್​ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಜೋಶ್ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಮತ್ತೋರ್ವ ವೇಗಿ ಸ್ಕಾಟ್ ಬೋಲ್ಯಾಂಡ್​ ಅವರನ್ನು ಪ್ಲೇಯಿಂಗ್ ಇಲೆವೆನ್​​ನಲ್ಲಿ ಸೇರಿಸಿಕೊಳ್ಳಲಾಗಿದೆ.

ಇನ್ನು ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್ ಖ್ವಾಜಾ ಹಾಗೂ ನಾಥನ್ ಮೆಕ್‌ಸ್ವೀನಿ ಇನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್, ನಾಲ್ಕನೇ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ಕಾಣಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!