ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇಳಾಪಟ್ಟಿ ಪ್ರಕಟ: ಆಸ್ಟ್ರೇಲಿಯಾದತ್ತ ಟೀಂ ಇಂಡಿಯಾ ಟೂರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರ್ಷಾಂತ್ಯದಲ್ಲಿ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.

ಈ ಸರಣಿಯ ವೇಳಾಪಟ್ಟಿಯನ್ನು ಆಸ್ಟ್ರೇಲಿಯಾ ಪ್ರಕಟಿಸಿದ್ದು, ಬರೋಬ್ಬರಿ ಮೂರು ದಶಕಗಳ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಮೊದಲ ಪಂದ್ಯವು ನವೆಂಬರ್ 22ರಂದು ಪರ್ತ್‌ನಲ್ಲಿ ಆರಂಭವಾಗಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 1991-92ರಲ್ಲಿ ಕೊನೆಯ ಬಾರಿಗೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ್ದವು.

ಇದೀಗ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗಮನದಲ್ಲಿಟ್ಟುಕೊಂಡು 5 ಪಂದ್ಯಗಳ ಟೆಸ್ಟ್ ಸರಣಿ ನಡೆಸಲು ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿದೆ.

ಮೊದಲ ಟೆಸ್ಟ್ ಪಂದ್ಯವು ಪರ್ತ್‌ನಲ್ಲಿ ನಡೆದರೆ, ಅಡಿಲೇಡ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ. ಇದಾದ ಬಳಿಕ ಬ್ರಿಸ್ಬೇನ್, ಮೆಲ್ಬರ್ನ್ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಸಿಡ್ನಿ ಆತಿಥ್ಯ ವಹಿಸಲಿದೆ. ನವೆಂಬರ್‌ 22ರಿಂದ ಆರಂಭವಾಗುವ ಈ ಟೆಸ್ಟ್ ಸರಣಿಯು 2025ರ ಜನವರಿ 07ರ ವರೆಗೆ ನಡೆಯಲಿದೆ.

ಕಳೆದ ವರ್ಷ ಇಂಗ್ಲೆಂಡ್‌ನ ದಿ ಓವೆಲ್ ಮೈದಾನದಲ್ಲಿ ನಡೆದ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲಿನ ಶಾಕ್ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಆಸ್ಟ್ರೇಲಿಯಾ ತಂಡದ ಎದುರು ಅವರದ್ದೇ ನೆಲದಲ್ಲಿ ಸೇಡು ತೀರಿಸಿಕೊಳ್ಳಲು ಮತ್ತೊಂದು ಅವಕಾಶ ಒದಗಿ ಬಂದಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ ನೋಡಿ:

ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಹಗಲು-ರಾತ್ರಿ ಪಂದ್ಯ)
ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬರ್ನ್
ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!