ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ.
ಪರ್ತ್‌ನಲ್ಲಿ ನಡೆದ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ 295 ರನ್ ಗಳ ಜಯ ಸಾಧಿಸಿದರೆ, ಅಡಿಲೇಡ್ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಗೆಲುವು ಕಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯು ಆರಂಭದಲ್ಲೇ 1-1 ಅಂತರದಿಂದ ಸಮಗೊಂಡಿದೆ.
ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಈ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದೆ. ಬ್ರಿಸ್ಬೇನ್‌ನ ಗಾಬ್ಬಾ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಬೆಳಗಿನ ಜಾವ 5.50 ಕ್ಕೆ ಆರಂಭವಾಗಲಿದೆ.
ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದ್ದು, ಈ ಮೂಲಕ ಸರಣಿ ಗೆಲುವಿನ ಸನಿಹಕ್ಕೆ ತಲುಪಬಹುದು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.