ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಶುರುವಾಗಲಿದೆ.
ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರೀ ಬದಲಾವಣೆ ಆಗಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಇವರು ಮೊದಲ ಟೆಸ್ಟ್ಗೆ ಲಭ್ಯರಿಲ್ಲ.
ರೋಹಿತ್ ಅಲಭ್ಯತೆಯಲ್ಲಿ ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಲಿದ್ದಾರೆ. ಸದ್ಯ ಜಸ್ಪ್ರಿತ್ ಬುಮ್ರಾ ಭಾರತ ಟೆಸ್ಟ್ ತಂಡದ ಉಪನಾಯಕ. ಹಾಗಾಗಿ ಇವರೇ ತಂಡವನ್ನು ಲೀಡ್ ಮಾಡಲಿದ್ದಾರೆ ಎಂದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಘೋಷಿಸಿದೆ.
ಈ ಬಗ್ಗೆ ಏನಂದ್ರು ಬುಮ್ರಾ?
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ನಾವು ಪಾಠ ಕಲಿತಿದ್ದೇವೆ. ಇಲ್ಲಿನ ಪರಿಸ್ಥಿತಿ ವಿಭಿನ್ನವಾಗಿದೆ. ಅಷ್ಟೇ ಅಲ್ಲ ಇಲ್ಲಿನ ಫಲಿತಾಂಶಗಳು ಕೂಡ ಡಿಫಿರೆಂಟ್ ಆಗಿವೆ. ಟಾಸ್ ವೇಳೆಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಡಿಸೈಡ್ ಆಗಲಿದೆ. ಗೆದ್ರೂ ಸೋತ್ರೂ ಶೂನ್ಯದಿಂದಲೇ ಆರಂಭಿಸಬೇಕು. ನಮಗೆ ಯಾವುದೇ ಒತ್ತಡ ಇಲ್ಲ ಎಂದರು.