ದಿನಗಳ ನಂತರ ಗುಂಡಿನ ಶಬ್ದವಿಲ್ಲದೆ ನೆಮ್ಮದಿಯಾಗಿ ನಿದ್ರಿಸಿದ ಗಡಿ ಜನತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.

ಹೀಗಾಗಿ ವಾರದ ನಂತರ ಗಡಿಯಲ್ಲಿ ಕಳೆದ ರಾತ್ರಿ ಗುಂಡಿನ ಶಬ್ದವಿಲ್ಲದೇ.. ಬಾಂಬ್ ಸ್ಫೋಟವಿಲ್ಲದೇ.. ಜನತೆ ಶಾಂತಿಯಿಂದ ನಿದ್ರೆ ಮಾಡಿದ್ದಾರೆ.

ಕಳೆದೊಂದು ವಾರದಿಂದ ಜೀವ ಭಯದಲ್ಲೇ ಸಮಯ ದೂಡಿದ್ದ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಿನ್ನೆ ರಾತ್ರಿ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಎರಡು ದಿನಗಳ ನಂತರ “ಜಮ್ಮು ಮತ್ತು ಕಾಶ್ಮೀರ ಮತ್ತು ಅಂತಾರಾಷ್ಟ್ರೀಯ ಗಡಿಯಾದ್ಯಂತ ರಾತ್ರಿ ಬಹುತೇಕ ಶಾಂತಿಯುತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಮೊದಲ ಶಾಂತಿಯುತ ರಾತ್ರಿಯನ್ನು ಗುರುತಿಸುವ ಮೂಲಕ ಯಾವುದೇ ಘಟನೆಗಳು ವರದಿಯಾಗಿಲ್ಲ” ಎಂದು ಸೇನೆಯು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!