ಗಡಿ ಉಲ್ಲಂಘಿಸಿದ್ದ ಪಾಕಿಸ್ತಾನಿಯರ ಮೀನುಗಾರಿಕಾ ದೋಣಿ ವಶಪಡಿಸಿಕೊಂಡ ಗಡಿ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭುಜ್ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಗುರುವಾರ ಗುಜರಾತ್‌ನ ಕಚ್ ಜಿಲ್ಲೆಯ ಹರಾಮಿ ನಾಲಾ ಕ್ರೀಕ್ ಪ್ರದೇಶದಿಂದ ಮೂರು ಪಾಕಿಸ್ತಾನಿ ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ. ಹರಾಮಿ ನಾಲಾ ತೊರೆಯು ಗುಜರಾತ್ ನ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿದೆ.

ಅಧಿಕಾರಿಗಳ ಪ್ರಕಾರ ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ದೋಣಿಗಳ ಚಲನೆಯನ್ನು ಗಮನಿಸಿದ ಸೈನಿಕರು ತಕ್ಷಣವೇ ಅವುಗಳನ್ನು ವಶಪಡಿಸಿಕೊಳ್ಳಲು ಧಾವಿಸಿದರು. ಬಿಎಸ್ಎಫ್ ಪಡೆಗಳು ಬರುತ್ತಿರುವುದನ್ನು ಕಂಡ ಪಾಕಿಸ್ತಾನಿ ಮೀನುಗಾರರು ತಮ್ಮ ದೋಣಿಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಮೀನುಗಾರರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ವಶಪಡಿಸಿಕೊಂಡ ದೋಣಿಗಳನ್ನು ಕೂಲಂಕುಷವಾಗಿ ಶೋಧಿಸಲಾಗಿದ್ದು ಅವುಗಳಲ್ಲಿ ಕೆಲವು ಮೀನು ಮತ್ತು ಮೀನುಗಾರಿಕೆ ಉಪಕರಣಗಳನ್ನು ಹೊರತುಪಡಿಸಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಈ ಹಿಂದೆ ಏಪ್ರಿಲ್ 4 ರಂದು ಕೂಡ ಇದೇ ಪ್ರದೇಶದಿಂದ ಪಾಕಿಸ್ತಾನದ ಮೀನುಗಾರಿಕಾ ದೋಣಿಯನ್ನು ಬಿಎಸ್‌ಎಫ್ ವಶಪಡಿಸಿಕೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!