spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಈಶಾನ್ಯ ರಾಜ್ಯಗಳ ಗಡಿ ಉದ್ವಿಗ್ನತೆ: ಸೌಹಾರ್ದಯುತವಾಗಿ ನಿವಾರಿಸಿಕೊಳ್ಳುವಂತೆ ಅಮಿತ್ ಶಾ ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಎರಡು ಈಶಾನ್ಯ ರಾಜ್ಯಗಳ ಗಡಿ ಉದ್ವಿಗ್ನತೆಯನ್ನು ಸೌಹಾರ್ದಯುತವಾಗಿ ನಿವಾರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಮಿಜೋರಾಂ ಸಿಎಂ ಜೊರಮಥಂಗ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಮತ್ತು ಅಸ್ಸಾಂ ಸಿಎಂರೊಂದಿಗೆ ಚರ್ಚಿಸಿದಂತೆ, ಮಿಜೋರಾಂ-ಅಸ್ಸಾಂ ಗಡಿ ಸಮಸ್ಯೆಯನ್ನು ಅರ್ಥಪೂರ್ಣ ಸಂವಾದದ ಮೂಲಕ ಸೌಹಾರ್ದಯುತವಾಗಿ ಪರಿಹರಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದು ಜೊರಮಥಾಂಗ ಟ್ವೀಟ್ ಮಾಡಿದ್ದಾರೆ.
ಜೊರಮಥಾಂಗ ಅವರು ಮಿಜೋರಾಂನ ಜನರನ್ನು ಪ್ರಚೋದಿತ ಸಂದೇಶಗಳನ್ನು ಪೋಸ್ಟ್ ಮಾಡುವುದನ್ನು ಮತ್ತು ಸಾಮಾಜಿಕ ಮಾಧ್ಯಮದ ದುರುಪಯೋಗವನ್ನು ಮಾಡಿಕೊಳ್ಳದಂತೆ ಒತ್ತಾಯಿಸಿದರು.
ಜುಲೈ 26 ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ ವೈರೆಂಗ್ಟೆ ಪಟ್ಟಣದ ಬಳಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ಆರು ಪೊಲೀಸ್ ಸಿಬ್ಬಂದಿ ಸೇರಿದಂತೆ ಅಸ್ಸಾಂನ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss