ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಇಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ದರ್ಶನ್ ಅವರ ಅಭಿಮಾನಿಗಳಿಗೆ ನಿಜಕ್ಕೂ ಒಂದು ದೊಡ್ಡ ಹಬ್ಬವೇ ಸರಿ. ರಾಜ್ಯಾದ್ಯಂತ ಮತ್ತು ಹೊರ ದೇಶಗಳಲ್ಲಿಯೂ ಸಂಭ್ರಮ-ಉಲ್ಲಾಸಗಳು ಮುಗಿಲುಮುಟ್ಟಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರದ ಬಿಡುಗಡೆಯನ್ನು ಉತ್ಸಾಹದಿಂದ ಆಚರಿಸುತ್ತಿದ್ದಾರೆ.
ಮುಂಜಾನೆ 6.30ರಿಂದಲೇ ಪ್ರದರ್ಶನಗಳು ಆರಂಭವಾಗಿದ್ದು, ಎಲ್ಲಾ ಕಡೆಗಳಲ್ಲಿ ಥಿಯೇಟರ್‌ಗಳು ಹೌಸ್‌ಫುಲ್ ಆಗಿವೆ. ಮೊದಲ ದಿನದ ಮೊದಲ ಶೋ ವೀಕ್ಷಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಾಂಪ್ರದಾಯಿಕ ಚಿತ್ರಮಂದಿರಗಳಷ್ಟೇ ಅಲ್ಲದೆ, ಮಲ್ಟಿಪ್ಲೆಕ್ಸ್‌ಗಳಲ್ಲಿಯೂ ಚಿತ್ರಕ್ಕೆ ಭಾರಿ ಬೇಡಿಕೆ ವ್ಯಕ್ತವಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನಿಮಾವನ್ನು ವೀಕ್ಷಿಸುತ್ತಿದ್ದಾರೆ.
ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಭಾರಿ ಮೆರವಣಿಗೆಗಳ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ‘ಡೆವಿಲ್’ ಮ್ಯಾನಿಯಾ ಎಲ್ಲೆಡೆ ಸೃಷ್ಟಿಯಾಗಿದ್ದು, ಚಿತ್ರಮಂದಿರದ ಆವರಣದಲ್ಲಿರುವ ಸಂಭ್ರಮಾಚರಣೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

