ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ ಶುಕ್ರವಾರಕ್ಕೆ ಮುಂದೂಡಲಾಗಿದೆ.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿತ್ತು. ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದವು, ಪರಿಣಾಮವಾಗಿ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.