ಈಗಲಾದರೂ ತೀರ್ಪಿಗೆ ತಲೆಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ: ಬಿಜೆಪಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್​ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!