ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ-ಭಾರತದ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ದಿನವೇ 17 ವಿಕೆಟ್ ಪತನವಾಗಿದೆ. ಮೊದಲ ದಿನದ ಅಂತ್ಯಕ್ಕೆ 27 ಓವರ್‌ಗಳಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿರುವ ಆಸೀಸ್ 83 ರನ್‌ಗಳ ಹಿನ್ನಡೆಯಲ್ಲಿದೆ.
ಪರ್ತ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ , ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆಯಿತು. ಆದ್ರೆ ಅಲ್ಪ ಮೊತ್ತ ಎಂದು ಭಾವಿಸಿದ್ದ ಆಸೀಸ್ ಬ್ಯಾಟರ್ ಗಳು ಬ್ಯಾಟಿಂಗ್ ನಡೆಸಲು ಎಡವಿದರು. ನಾಯಕ ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ ಹಾಗೂ ಹರ್ಷಿತ್ ರಾಣಾ ಅವರ ವೇಗದ ದಾಳಿಗೆ ಆಸೀಸ್ ಟಾಪ್ ಬ್ಯಾಟರ್‌ಗಳು ಧೂಳಿಪಟವಾದರು
ಆರಂಭಿಕ ಉಸ್ಮಾನ್ ಖವಾಜ (8 ರನ್), ನಾಥನ್ ಮೆಕ್‌ಸ್ವೀನಿ (10 ರನ್), ಮಾರ್ನಸ್ ಲಾಬುಶೇನ್ (2 ರನ್), ಟ್ರಾವಿಸ್ ಹೆಡ್ (11 ರನ್), ಸ್ಟೀವ್ ಸ್ಮಿತ್ (0), ಮಿಚೆಲ್ ಮಾರ್ಷ್ (6 ರನ್), ನಾಯಕ ಪ್ಯಾಟ್ ಕಮ್ಮಿನ್ಸ್ (3 ರನ್) ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಆದ್ರೆ ಕ್ರೀಸ್‌ನಲ್ಲಿ ಸುಧಾರಿತ ಪ್ರದರ್ಶನ ನೀಡಿದ ಮಧ್ಯಮ ಕ್ರಮಾಂಕದ ಬ್ಯಾಟರ್ ಅಲೆಕ್ಸ್ ಕ್ಯಾರಿ 28 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 19 ರನ್, ಮಿಚೆಲ್ ಸ್ಟಾರ್ಕ್ 6 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದಿದ್ದಾರೆ.
ನಾಯಕನಾಗಿ ಕಣಕ್ಕಿಳಿದ ಬುಮ್ರಾ 10 ಓವರ್‌ಗಳಲ್ಲಿ 3 ಮೇಡಿನ್ ಸೇರಿದಂತೆ ಕೇವಲ 17 ರನ್ ಬಿಟ್ಟುಕೊಟ್ಟು ಪ್ರಮುಖ ನಾಲ್ಕು ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಹಾಗೂ ಹರ್ಷಿತ್ ರಾಣಾ 1 ವಿಕೆಟ್ ಪಡೆದು ಮಿಂಚಿದ್ದಾರೆ.
150ಕ್ಕೆ ಭಾರತ ಆಲೌಟ್
ಇದಕ್ಕೂ ಮುನ್ನ ಬ್ಯಾಟ್ ಬೀಸಿದ ಭಾರತ 150 ರನ್‌ಗಳಿಗೆ ಆಕೌಟ್ ಆಯಿತು. ನಿತೀಶ್ ಕುಮಾರ್ ರೆಡ್ಡಿ 41 ರನ್ (59 ಎಸೆತ, 6 ಬೌಂಡರಿ, 1 ಸಿಕ್ಸರ್), ರಿಷಬ್ ಪಂತ್ 37 ರನ್ (78 ಎಸೆತ, 3 ಬೌಂಡರಿ, 1 ಸಿಕ್ಸರ್), ರನ್ ಕೆ.ಎಲ್ ರಾಹುಲ್ 26 ರನ್ (74 ಎಸೆತ, 3 ಬೌಂಡರಿ) ಗಳಿಸಿದ್ದು ಬಿಟ್ಟರೆ, ಉಳಿದವರು ಅಲ್ಪ ಮೊತ್ತಕ್ಕೆ ಆಲೌಟ್ ಆದರು. ಆರಂಭಿಕ ಯಶಸ್ವಿ ಜೈಸ್ವಾಲ್, ದೇವದತ್ ಪಡಿಕಲ್ ಶೂನ್ಯ ಸುತ್ತಿದ್ದರು.