ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಕಾರ್ಯಪಾಲಕ ಎಂಜಿನಿಯರ್‌ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಂತ್ರಿಕ ವೈಫಲ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಬೌರಿಂಗ್ ಆಸ್ಪತ್ರೆ ವ್ಯಾಪ್ತಿಯ ಕಾರ್ಯಪಾಲಕ ಇಂಜಿನಿಯರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ. ಬೌರಿಂಗ್‌ ಆಸ್ಪತ್ರೆಯಲ್ಲಿ ನಡೆದ ಘಟನೆ ಕುರಿತು ಚರ್ಚೆ ನಡೆಸಲು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಈ … Continue reading ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಕಾರ್ಯಪಾಲಕ ಎಂಜಿನಿಯರ್‌ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಆದೇಶ