October 18, 2026
Sunday, October 18, 2026
spot_img

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಗೋಡೆ ಕುಸಿದು 7 ಮಂದಿ ಸಾವನ್ನಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಘಟನಾ ಸ್ಥಳದಿಂದ ಆಸ್ಪತ್ರೆಗೆ ಭೇಟಿ ನೀಡಿದ ಅವರು ,ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ದುರ್ಘಟನೆಯಲ್ಲಿ ಏಳು ಜನ ಸಾವನ್ನಪ್ಪಿದ್ದ ವಿಚಾರ ತಿಳಿದು ಮನಸ್ಸಿಗೆ ಅಪಾರ ನೋವು ತಂದಿದೆ. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರವು ಮೃತರ ಕುಟುಂಬದವರ ಬೆನ್ನಿಗೆ ನಿಂತಿದ್ದು, ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಡಿಕೆಶಿ ತಿಳಿಸಿದರು.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಸೂಕ್ತ ತನಿಖೆಗೆ ಆದೇಶ ನೀಡಿದ್ದರು.

Must Read