ಬಾಕ್ಸಿಂಗ್​ ರಿಂಗ್​​ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಬಾಕ್ಸರ್​​ ಯಮಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎದುರಾಳಿ ಜೊತೆ ಬಾಕ್ಸಿಂಗ್​ ಆಡುತ್ತಿದ್ದಾಗಲೇ ರಿಂಗ್​​ನಲ್ಲೇ ಹೃದಯಾಘಾತಕ್ಕೊಳಗಾಗಿ ಯುವ ಬಾಕ್ಸರ್ ಮೂಸಾ ಯಮಕ್​​​​​ ಸಾವನ್ನಪ್ಪಿದ್ದಾರೆ. ಅವರಿಗೆ ಕೇವಲ 38 ವರ್ಷ ವಯಸ್ಸಾಗಿತ್ತು. ವೃತ್ತಿಪರ ಬಾಕ್ಸಿಂಗ್​ನಲ್ಲಿ ಸೋಲಿಲ್ಲದ ಸರದಾರನಾಗಿದ್ದ ಯಂಗ್​ ಬಾಕ್ಸರ್​ ಇಲ್ಲಿಯವರೆಗೆ ತಾವು ಆಡಿರುವ 75 ಪಂದ್ಯಗಳಲ್ಲಿ ಎದುರಾಳಿಗಳನ್ನು ಮಣಿಸಿ ಗೆಲುವು ದಾಖಲಿಸಿದ್ದರು.
ಅವರ ದಿಢೀರ್​ ಸಾವಿನಿಂದ ಕ್ರೀಡಾ ವಲಯ ಆಘಾತಕ್ಕೊಳಗಾಗಿದೆ. ಜರ್ಮನಿಯಲ್ಲಿ ವಾಸವಾಗಿದ್ದ ಬಾಕ್ಸರ್ ಮೂಸಾ ಯಮಕ್​​, ಕೇವಲ 12ನೇ ವಯಸ್ಸಿನಲ್ಲಿದ್ದಾಗಲೇ ಬಾಕ್ಸಿಂಗ್​ ವೃತ್ತಿ ಬದುಕು ಆರಂಭಿಸಿದ್ದರು.
ಜರ್ಮನಿಯ ಮ್ಯೂನಿಚ್​​ನಲ್ಲಿ ನಡೆದ 84+ ಕೆಜಿ ಬಾಕ್ಸಿಂಗ್​ ಪಂದ್ಯದ ಮೂರನೇ ಸುತ್ತಿನಲ್ಲಿ ಅವರು ಎದುರಾಳಿ ವಿರುದ್ಧ ಸೆಣಸಾಟ ನಡೆಸಿದ್ದ ಸಂದರ್ಭ ದಿಢೀರ್ ಹೃದಯಾಘಾತಕ್ಕೊಳಗಾಗಿ, ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರ ತಂಡ ಘೋಷಣೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!