ರೋಚಕ ಘಟಕ್ಕೆ ಬಾಕ್ಸಿಂಗ್‌ ಡೇ ಟೆಸ್ಟ್‌: 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 228/9

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯ ಕುತೂಹಕಾರಿ ಘಟ್ಟ ತಲುಪಿದ್ದು, 4ನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ನಷ್ಟಕ್ಕೆ 228 ರನ್ ಗಳಸಿ 333ರನ್ ಗಳ ಮುನ್ನಡೆ ಸಾಧಿಸಿದೆ.

ಎರಡನೇ ಇನಿಂಗ್ಸ್‌ನಲ್ಲಿ ಸಾಧಾರಣ ಮೊತ್ತಕ್ಕೆ ಕುಸಿಯುವ ಆತಂಕದಲ್ಲಿದ್ದ ಆತೀಥೇಯ ತಂಡಕ್ಕೆ ಬಾಲಂಗೋಚಿ ಬ್ಯಾಟರ್‌ಗಳಾದ ನೇಥನ್‌ ಲಯನ್‌ ಹಾಗೂ ಸ್ಕಾಟ್‌ ಬೋಲ್ಯಾಂಡ್‌ ಆಸರೆಯಾದರು.

ಆಸ್ಟ್ರೇಲಿಯಾ ಬಳಿ ಇನ್ನು 1 ವಿಕೆಟ್ ಇದ್ದು ಅಂತಿಮದಿನವಾದ ನಾಳೆ ಒಂದಷ್ಟು ಸಮಯ ಬ್ಯಾಟ್ ಮಾಡಿ ಭಾರತಕ್ಕೆ ಸವಾಲಿನ ಗುರಿ ನೀಡುವ ಇರಾದೆಯಲ್ಲಿದೆ.

ಆದರೆ ಇತ್ತ ಭಾರತ ತಂಡ ಕೂಡ ಮೊದಲ ಸೆಷನ್ ನಲ್ಲೇ ಆಸ್ಟ್ರೇಲಿಯಾವನ್ನು ಆಲೌಟ್ ಮಾಡಿ ಗುರಿಯನ್ನು ಬೆನ್ನು ಹತ್ತಿ 4ನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಇನ್ನು ಭಾರತದ ಪರ 2ನೇ ಇನ್ನಿಂಗ್ಸ್ ನಲ್ಲಿ ಜಸ್ ಪ್ರೀತ್ ಬುಮ್ರಾ ಮತ್ತು ಮಹಮದ್ ಸಿರಾಜ್ ಭರ್ಜರಿ ಬೌಲಿಂಗ್ ಮಾಡಿದರು. ಬುಮ್ರಾ 4 ವಿಕೆಟ್ ಪಡೆದರೆ, ಸಿರಾಜ್ ಮೂರು ವಿಕೆಟ್ ಪಡೆದರು. ಅಂತೆಯೇ ರವೀಂದ್ರ ಜಡೇಜಾ 1 ವಿಕೆಟ್ ಪಡೆದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!