ಮೂರ್ನಾಲ್ಕು ಪೂರಿಯನ್ನು ಒಂದೇ ಬಾರಿ ತುರುಕಿ ತಿಂದ ಬಾಲಕ ಉಸಿರುಗಟ್ಟಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನದ ಊಟ ಮಾಡುವಾಗ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಿಗೆ ಬಾಯಿಗೆ ಹಾಕಿಕೊಂಡಿದ್ದ, ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಹೈದರಾಬಾದಿನ ಶಾಲೆಯೊಂದರಲ್ಲಿ ಊಟದ ಸಮಯ, 6ನೇ ತರಗತಿ ವಿದ್ಯಾರ್ಥಿ ಎಲ್ಲರ ಜತೆ ಊಟಕ್ಕೆ ಕೂತಿದ್ದ ಒಂದೇ ಬಾರಿಗೆ ಎಲ್ಲಾ ಪೂರಿಗಳನ್ನು ತಿಂದಿದ್ದ. ಆದರೆ ಏಕಕಾಲಕ್ಕೆ ಹೆಚ್ಚಿನ ಪ್ರಮಾಣದ ಆಹಾರವನ್ನು ಏಕೆ ತಿಂದಿದ್ದಾನೆ ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ.

ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆಯ ಹೇಳಿಕೆಯೂ ಹೊರಬಿದ್ದಿದೆ. ವಿದ್ಯಾರ್ಥಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಮಗ ಪೂರಿ ತಿನ್ನುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಕುರಿತು ಶಾಲೆಯಿಂದ ಕರೆ ಬಂದಿದ್ದಾಗಿ ಹೇಳಿದ್ದಾರೆ.

ಕೂಡಲೇ ಬಾಲಕನನ್ನು ಶಾಲೆಯ ಸಿಬ್ಬಂದಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಖಾಸಗಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಯಿತು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!