August 4, 2026
Tuesday, August 4, 2026
spot_img

ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು

ಹೊಸದಿಗಂತ ವರದಿ ಪುತ್ತೂರು:

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ ( 15) ಮೃತಪಟ್ಟ ಬಾಲಕ.

ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆ ಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಇಂದು ಬೆಳಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !