March 12, 2026
Thursday, March 12, 2026
spot_img

SHOCKING | ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್ ಶೇಖ್ (5) ಎಂದು ಗುರುತಿಸಲಾಗಿದೆ. ಕುಟುಂಬದವರ ಜೊತೆ ಆಟವಾಡುತ್ತಿದ್ದಾಗ ಮಗು ಕಾಲುಜಾರಿ ಈಜುಕೊಳಕ್ಕೆ ಬಿದ್ದಿದೆ. ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಶಾಹಿದುಲ್ಲಾಹ ಹೋಮ್ ಸ್ಟೇ ಮನೆಯನ್ನು ಲೀಸ್‍ಗೆ ಪಡೆದಿದ್ದರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !