ಭದ್ರಾ ಡ್ಯಾಮ್‍ಗೆ ಕಾಲು ಜಾರಿ ಬಿದ್ದು ಬಾಲಕ ಸಾವು, ರಕ್ಷಣೆಗೆ ಹೋದ ವ್ಯಕ್ತಿ ಸುಳಿವಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭದ್ರಾ ಜಲಾಶಯದ ಹಿನ್ನೀರಿಗೆ ತೆರಳಿದ್ದ ಬಾಲಕ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಭದ್ರಾವತಿ ತಾಲೂಕಿನ ಬಿಆರ್‌ಪಿ ಜಲಾಶಯದಲ್ಲಿ ನಡೆದಿದೆ.

ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ. ರಜೆ ಇದ್ದಿದ್ದರಿಂದ ಜಲಾಶಯವನ್ನು ವೀಕ್ಷಿಸಲು ಕುಟುಂಬದೊಂದಿಗೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಬಾಲಕನ ಮೃತ ದೇಹ ಪತ್ತೆಯಾಗಿದೆ. ಇನ್ನೂ ನಾಪತ್ತೆಯದ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!