ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್ ಪಟ್ಟಣದಲ್ಲಿ ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ.
ಮೃತ ಬಾಲಕನನ್ನು ನಿಹಾಲ್ ಎಂದು ಗುರುತಿಸಲಾಗಿದೆ. ನಿಹಾಲ್ ಭಾನುವಾರ ಸಂಜೆ 5 ಗಂಟೆಯಿಂದ ನಾಪತ್ತೆಯಾಗಿದ್ದ. ಗಾಬರಿಗೊಂಡ ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ರಾತ್ರಿ 8 ಗಂಟೆ ಸುಮಾರಿಗೆ ಮತ್ತೊಂದು ಮನೆಯ ಬಳಿ ಬೀದಿ ನಾಯಿ ಕಡಿತಕ್ಕೊಳಗಾಗಿ ಬಿದ್ದಿರುವುದು ಕಂಡುಬಂದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತನಿಖೆ ವೇಳೆ ನಿಹಾಲ್ ಕಿವುಡ ಎಂದು ತಿಳಿದುಬಂದಿದೆ. ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.