ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 14 ರಂದು ದುಬೈನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಆದ್ರೆ ಈ ಪಂದ್ಯದ ಬಗ್ಗೆ ಭಾರತದಲ್ಲಿ ಸಾಕಷ್ಟು ಪ್ರತಿಭಟನೆ ವ್ಯಕ್ತವಾಗುತ್ತಿದೆ.
ಈ ಪಂದ್ಯವನ್ನು ರದ್ದುಗೊಳಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಮಾಡಲಾಗುತ್ತಿದೆ. ದೇಶಕ್ಕಿಂತ ಕ್ರಿಕೆಟ್ ಮುಖ್ಯವಲ್ಲ, ಪಾಕಿಸ್ತಾನಕ್ಕೆ ಬುದ್ದಿ ಕಲಿಸಬೇಕೆಂದರೆ, ಅವರ ವಿರುದ್ಧ ಯಾವುದೇ ಪಂದ್ಯವನ್ನು ಆಡಬಾರದು ಎಂದು ಭಾರತೀಯರು ಒತ್ತಾಯಿಸುತ್ತಿದ್ದಾರೆ.
ಭಾರತೀಯರಿಗೆ ಕರೆಕೊಟ್ಟಿರುವ ನೆಟ್ಟಿಗರು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಯಾರು ನೋಡಬೇಡಿ ಎಂದಿದ್ದಾರೆ.
ಪಾಕಿಸ್ತಾನದ ಹಾಕಿ ತಂಡ ಏಷ್ಯಾಕಪ್ ಆಡಲು ಭಾರತಕ್ಕೆ ಬಂದಿರಲಿಲ್ಲ, ಆದರೆ ಯುಎಇಯಲ್ಲಿ ನಡೆಯುತ್ತಿರುವ 2025 ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಸೆಪ್ಟೆಂಬರ್ 14 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದೆ. ಇದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ನಡೆದಿದ್ದ ಲೆಜೆಂಡ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಪಂದ್ಯವನ್ನಾಡಲು ನಿರಾಕರಿಸಿ ಪಂದ್ಯಾವಳಿಯಿಂದ ತನ್ನ ಹೆಸರನ್ನು ಹಿಂಪಡೆದುಕೊಂಡಿತ್ತು. ಇದೀಗ ಟೀಂ ಇಂಡಿಯಾ ಕೂಡ ಅದೇ ದಾರಿಯನ್ನು ಅನುಸರಿಸಬೇಕು ಎಂಬುದು ಭಾರತೀಯರ ಆಗ್ರಹವಾಗಿದೆ.
https://x.com/Zaira_Nizaam/status/1966455340607668355
ಭಾರತ-ಪಾಕ್ ಆಟಕ್ಕೆ ವಿರೋಧ ವ್ಯಕ್ತವಾಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಕೀಯ ನಾಯಕರು ಮತ್ತೊಮ್ಮೆ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ಒತ್ತಾಯಿಸಿದ್ದಾರೆ. ಟೀಕೆಗಳು ಹೆಚ್ಚಾಗಿ ವಿರೋಧ ಪಕ್ಷಗಳಿಂದಲೇ ಕೇಳಿಬರುತ್ತಿವೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂದ್ಯವನ್ನು ವಿರೋಧಿಸಿವೆ.