Thursday, March 23, 2023

Latest Posts

ಮೂಲಸೌಕರ್ಯ ವಂಚಿತರಾದ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಹೊಸದಿಗಂತ ವರದಿ ಬನವಾಸಿ :

23 ವರ್ಷಗಳಿಂದ ಆದರ್ಶನಗರ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಬ್ಯಾನರ್ ಅನ್ನು ಆದರ್ಶನಗರದಲ್ಲಿ ಕಟ್ಟಿದ್ದಾರೆ.

ಸುಮಾರು 50ಕ್ಕೂ ಅಧಿಕ ಮನೆಗಳಿರುವ ಆದರ್ಶ ನಗರದಲ್ಲಿ ಮೂಲಭೂತ ಸೌಕರ್ಯಗಳೇ ಮರೆಯಾಗಿದೆ. ಇಲ್ಲಿನ ರಸ್ತೆಗಳಿಗೆ ಡಾಂಬರ್, ಕಾಂಕ್ರೀಟ್ ಭಾಗ್ಯವೇ ಇಲ್ಲ. ಚರಂಡಿ ವ್ಯವಸ್ಥೆ ಇಲ್ಲವೇ ಇಲ್ಲ. ಗ್ರಾಮ ಪಂಚಾಯತಿಗೆ 85% ತೆರಿಗೆ ಕಟ್ಟುತ್ತಿದ್ದರು ಮೂಲ ಸೌಕರ್ಯ ಮರಿಚೀಕೆಯಾಗಿದೆ. ಇಲ್ಲಿನ ರಸ್ತೆಯಲ್ಲಿ ಮಳೆಗಾಲದಲ್ಲಿ ನಡೆದಾಡಲು ಸಾಧ್ಯವಿರುವುದಿಲ್ಲ. ಬೇಸಿಗೆಯಲ್ಲಿ ಮನೆಯ ಹೊರಗಡೆ ಯಾವ ವಸ್ತುಗಳನ್ನು ಒಣಗಿಸಲು ಸಾಧ್ಯವಿಲ್ಲ. ಇಲ್ಲಿನ ನಿವಾಸಿಗಳ ಸಂಕಷ್ಟ ಯಾರಿಗೂ ಹೇಳುವ ಆಗಿಲ್ಲ. ಹಾಗಾಗಿ 2023ರ ವಿಧಾನಸಭೆಯ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರ ಮಾಡಲಾಗಿದೆ.

ಕದಂಬೋತ್ಸವ ಮೈದಾನಕ್ಕೆ ಸಾಗುವ ಬೈಪಾಸ್ ರಸ್ತೆಗೆ ರಾತ್ರೋರಾತ್ರಿ ತರಾತುರಿಯಲ್ಲಿ ಡಾಂಬರೀಕರಣ ಮಾಡಲಾಗಿದೆ. ಅದು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ. ಪಟ್ಟಣದ ಪ್ರತಿಯೊಂದು ಭಾಗದಲ್ಲಿ ರಸ್ತೆ, ಚೆರಂಡಿ ಕಾರ್ಯಗಳು ನಡೆಯುತ್ತಿವೆ. ಆದರೆ ಆದರ್ಶನಗರ ಯಾಕೆ ಜನಪ್ರತಿನಿಧಿಗಳ ಕಣ್ಣಿಗೆ ಕಾಣಿಸುತ್ತಿಲ್ಲ ಎಂಬುದು ತಿಳಿದಿಲ್ಲ ಎಂದು ಅಲ್ಲಿನ ನಿವಾಸಿ ಅಶೋಕ ರಿತ್ತಿ ಅಕ್ರೋಶ ವ್ಯಕ್ತಪಡಿಸಿದರು.

ಆದರ್ಶನಗರದ ಚೆರಂಡಿ ಹಾಗೂ ರಸ್ತೆ ನಿರ್ಮಾಣದ ಸಮಸ್ಯೆಯನ್ನು ಸಚಿವರ ಗಮನಕ್ಕೆ ತರಲಾಗಿದೆ. ಶೀಘ್ರವಾಗಿ ಪರಿಹಾರ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಅಶೋಕ ಪೊನ್ನಪ್ಪ ಹೊಸದಿಗಂತಕ್ಕೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!