ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಾ ವಿಚಾರ ಮಾತಿನ ಸಮರಕ್ಕೆ ವೇದಿಕೆ ಹಾಕಿಕೊಟ್ಟಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಇತ್ತ ಇದೀಗ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.