ಅರಮನೆ ಮೈದಾನದಲ್ಲಿ ಬ್ರಾಹ್ಮಣ ಸಮಾವೇಶ: ಪರ್ಯಾಯ ರಸ್ತೆ ಮೂಲಕ ಓಡಾಟ ನಡೆಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಇತರೆ ಸಚಿವರುಗಳು, ಸಮಾಜದ ವಿವಿಧ ಮಠಾಧೀಶರು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ವಿಪ್ರ ಬಾಂಧವರು ಸೇರಲಿದ್ದಾರೆ. ಈ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಲಿರುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಅರಮನೆ ಮೈದಾನ ರಸ್ತೆ ಮತ್ತು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಮಾಡಿ ಪರ್ಯಾಯ ಮಾರ್ಗಗಗಳನ್ನು ಜನತೆಗೆ ಸೂಚಿಸಿದ್ದಾರೆ.

ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್​ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್‌ರ್ಯಾಂವ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ಯೂತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.

ಪರ್ಯಾಯ ವ್ಯವಸ್ಥೆ ಹೀಗಿದೆ..

ಅರಮನೆ ರಸ್ತೆ : ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ವಸಂತನಗರ ಅಂಡರ್‌ಪಾಸ್​ವರೆಗೆ

ಎಂ.ವಿ.ಜಯರಾಮರಸ್ತೆ : ಅರಮನೆರಸ್ತೆ, ಬಿ.ಡಿ.ಎ.ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್​ ಸೇರಿದಂತೆ ವಸಂತನಗರ ಅಂಡರ್ ಪಾಸ್ ನಿಂದ ಹಳೆ ಉದಯ ಟಿ.ವಿ. ಜಂಕ್ಷನ್ ವರೆಗೆ. (ಎರಡು ದಿಕ್ಕಿನಲ್ಲಿ)

ಬಳ್ಳಾರಿ ರಸ್ತೆ: ಎಲ್.ಆರ್.ಡಿ.ಇ. ಯಿಂದ ಹೆಬ್ಬಾಳವರೆಗೆ

ಕನ್ನಿಂಗ್ ಹ್ಯಾಂ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಲಿ ಮೆರಿಡಿಯನ್ ಅಂಡರ್​​ ಪಾಸ್​​ವರೆಗೆ

ಮಿಲ್ಲರ್​ ರಸ್ತೆ: ಹಳೆ ಉದಯ ಟಿವಿ ಜಂಕ್ಷನ್​ನಿಂದ ಎಲ್.ಆ‌ರ್.ಡಿ.ಇ ಜಂಕ್ಷನ್​ವರೆಗೆ.

ಜಯಮಹಲ್‌ ರಸ್ತೆ : ಜಯಮಹಲ್‌ ರಸ್ತೆ ಹಾಗೂ ಬೆಂಗಳೂರು ಅರಮನೆಯ ಸುತ್ತಮುತ್ತಲ ರಸ್ತೆಗಳು

ಯಶವಂತಪುರ ಮತ್ತು ಮೇಖಿ ಸರ್ಕಲ್ ರಸ್ತೆ : ಯಶವಂತಪುರ-ಟಾಟಾ ವಿಜ್ಞಾನ ಸಂಸ್ಥೆ-ಮೇಖಿ ಸರ್ಕಲ್‌ವರೆಗೆ

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!