ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು ಜನಿವಾರ ಹಾಕಿದ್ದಾರೆ ಎನ್ನುವ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಇದು ಬ್ರಾಹ್ಮಣ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸಿಇಟಿ ಪರೀಕ್ಷೆ ವೇಳೇ ಅಮಾನವೀಯ ಘಟನೆ ನಡೆದಿದೆ. ಜನಿವಾರ ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ ಮತ್ತು ಬೀದರ್ ಜಿಲ್ಲೆಗಳಲ್ಲಿ ನಡೆದಿದೆ.
ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಈ ಬಗ್ಗೆ ವರದಿ ಪಡೆಯೋದಾಗಿ ಕೆಇಎ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಸಿಇಟಿ ಪರೀಕ್ಷೆಗಾಗಿಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ.
ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.