Tuesday, June 28, 2022

Latest Posts

ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧ ಅವಹೇಳನ: ಬಂಧನಕ್ಕೆ ಸಚಿವ ಶಿವರಾಮ ಹೆಬ್ಬಾರ್ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಯಲ್ಲಾಪುರ :

ಕನ್ನಡ ಚಿತ್ರನಟ ಚೇತನ್  ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದನ್ನು ತೀವ್ರವಾಗಿ ಖಂಡಿಸಿರುವ‌ ಕಾರ್ಮಿಕ ಹಾಗೂ ಉ.ಕ ಜಿಲ್ಲಾ ಮಂತ್ರಿ ಶಿವರಾಮ ಹೆಬ್ಬಾರ್ , ಈ ನಟನನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ‌ ಮುಖ್ಯಮಂತ್ರಿಯವರನ್ನು ಒತ್ತಾಯ ಮಾಡಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು.
ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss