Sunday, February 28, 2021

Latest Posts

ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ: ಕ್ಷಮೆ ಕೋರಿದ ನಿರ್ದೇಶಕ, 14 ದೃಶ್ಯಗಳು ಡಿಲೀಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ನಂದಕಿಶೋರ್ ಕ್ಷಮೆ ಕೇಳಿದ್ದಾರೆ. ಜೊತೆಗೆ ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರದಿಂದ ತೆಗೆಯಲು ಒಪ್ಪಿಕೊಂಡಿದ್ದಾರೆ.
ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರ ಜತೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ನಿರ್ದೇಶಕ, ನಮಗೆ ಯಾವುದೇ ಸಮುದಾಯವನ್ನು ಅವಮಾನಗೊಳಿಸುವ ಹಾಗೂ ಯಾರಿಗೂ ವೈಯಕ್ತಿಕವಾಗಿ ನೋವು ಮಾಡುವ ಉದ್ದೇಶ ಇರಲಿಲ್ಲ. ಸನ್ನಿವೇಶಕ್ಕೆ ಅಗತ್ಯವೆಂದು ಆ ದೃಶ್ಯಗಳನ್ನು ಶೂಟ್ ಮಾಡಲಾಗಿತ್ತು. ಒಬ್ಬರನ್ನು ನೋಯಿಸಿ ಹಣ ಗಳಿಕೆ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಆ ದೃಶ್ಯಗಳಿಂದ ನೋವಾಗಿದ್ದರೆ ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೋರುತ್ತೇನೆ ಎಂದರು.
ಇನ್ನು ವಿವಾದಿತ ದೃಶ್ಯಗಳನ್ನು ಡಿಲೀಟ್ ಮಾಡಲು ಎರಡು ದಿನ ಕಾಲಾವಕಾಶ ಕೇಳಿರುವ ನಂದ ಕಿಶೋರ್, ಇವತ್ತಿನಿಂದಲೇ ಕಾರ್ಯೋನ್ಮುಖರಾಗುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಮಾತಾಡಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಪೊಗರು ಚಿತ್ರದಲ್ಲಿ ನಮ್ಮ ಸಮುದಾಯಕ್ಕೆ ಅಪಮಾನ ಮಾಡಿರುವಂತಹ ದೃಶ್ಯಗಳನ್ನು ನೋಡಿ ನೋವಾಯಿತು. ನಿರ್ದೇಶಕರು ಚಿತ್ರದಲ್ಲಿಯ ವಿವಾದಿತ 14 ದೃಶ್ಯಗಳನ್ನು ತೆಗೆಯುವಂತೆ ನಾವು ಮಾಡಿರುವ ಮನವಿಗೆ ಒಪ್ಪಿಕೊಂಡಿದ್ದಾರೆ. ಇನ್ಮುಂದೆ ಬ್ರಾಹ್ಮಣರನ್ನು ಕೆಣಕಲು ಹೋಗಬೇಡಿ, ನಮ್ಮ ಸಮಾಜಕ್ಕೆ ಅವಮಾನ ಮಾಡದಿರಿ ಎಂದು ರಾಜಕಾರಣಿಗಳಿಗೆ ಹಾಗೂ ಚಿತ್ರರಂಗಕ್ಕೆ ಪತ್ರಿಕಾಗೋಷ್ಟಿ ಮೂಲಕ ಎಚ್ಚರಿಕೆ ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!