ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ನೀಡಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ್ದು, ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂದೂರ’ ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.
ಇದು ಪಾಕಿಸ್ತಾನಕ್ಕೆ ಟ್ರೇಲರ್ ಅಷ್ಟೇ, ಪಿಚ್ಚರ್ ಇನ್ನು ಬಾಕಿ ಇದೆ. ಭಾರತ ಶಕ್ತಿಶಾಲಿ ಅಸ್ತ್ರವಾದ ಬ್ರಹ್ಮೋಸ್ ಯಾವುದೇ ಕಾರಣಕ್ಕೂ ಶತ್ರು ರಾಷ್ಟ್ರವನ್ನು ಬಿಡುವುದಿಲ್ಲ. ಆಪರೇಷನ್ ಸಿಂದೂರ್ ಸಮಯದಲ್ಲೂ ಭಾರತ ಬಿಟ್ಟಿಲ್ಲ. ಆಪರೇಷನ್ ಸಿಂದೂರ್ ಗೆಲುವು ಒಂದು ಸಣ್ಣ ಮಾತಲ್ಲ,ಗೆಲುವು ನಮ್ಮ ಅಭ್ಯಾಸ, ನಮ್ಮ ವಿರೋಧಿಗಳು ಇನ್ನು ಮುಂದೆ ಬ್ರಹ್ಮೋಸ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ದೇಶದ ವಿಶ್ವಾಸವಾಗಿದೆ ಎಂದು ಹೇಳಿದರು.
ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಭಾರತದ ಬೆಳೆಯುತ್ತಿರುವ ದೊಡ್ಡ ಅಸ್ತ್ರವಾಗಿದೆ. ವೇಗ, ನಿಖರತೆ ಮತ್ತು ಶಕ್ತಿಯಿಂದ ಸಂಯೋಜನೆಗೊಂಡಿರುವ ಅಸ್ತ್ರವಾಗಿದೆ. ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತದೆ. ಹಾಗೂ ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬು ಎಂದು ಹೇಳಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬ್ರಹ್ಮೋಸ್ ಕ್ಷಿಪಣಿಗಳು ಭಾರತದ ರಕ್ಷಣಾ ಅಗತ್ಯಗಳಲ್ಲಿ ಸ್ವಾವಲಂಬನೆಯನ್ನು ಹೊಂದಿದೆ. ಭಾರತವು ಈಗ ತನ್ನ ಭದ್ರತಾ ಅಗತ್ಯಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ತನ್ನ ಸ್ನೇಹಪರ ರಾಷ್ಟ್ರಗಳ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದರು. ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡುವ ಮೂಲಕ, ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪ್ರತಿಜ್ಞೆಯನ್ನು ಈಡೇರಿಸುವಲ್ಲಿದೊಡ್ಡ ಹೆಜ್ಜೆಯನ್ನು ಇಟ್ಟಿದೆ ಎಂದು ಹೇಳಿದರು.