ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ನೌಕಾಪಡೆಯ ಸಾಮರ್ಥ್ಯ ಹೆಚ್ಚಿಸಲಿರುವ ಬ್ರಹ್ಮೋಸ್‌ ಸೂಪರ್‌ ಸಾನಿಕ್‌ (ಶಬ್ದಾತೀತ) ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಭಾರತೀಯ ನೌಕಾಪಡೆಗೆ ಹೊಸದಾಗಿ ಸೇರ್ಪಡೆಯಾಗಿರುವ, ಸ್ವದೇಶಿ ನಿರ್ಮಿತ ಕ್ಷಿಪಣಿ ನಾಶಕ ಯುದ್ಧನೌಕೆ ಐಎನ್‌ಎಸ್‌ ಮರ್ಮುಗಾವೊ ಮೂಲಕ ಇದೇ ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು ಉಡಾವಣೆ ಮಾಡಿದ್ದು, ಅದು ನಿಖರವಾಗಿ ದಾಳಿ ನಡೆಸಿದೆ.

ಇದು ರಕ್ಷಣಾ ಕ್ಷೇತ್ರದಲ್ಲಿ ದೇಶವು ಆತ್ಮನಿರ್ಭರತೆ ಸಾಧಿಸುತ್ತಿರುವುದರ ದ್ಯೋತಕವಾಗಿದೆ. ನೌಕಾಪಡೆಯ ಶಕ್ತಿಯನ್ನೂ ಅನಾವರಣಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಯುದ್ಧನೌಕೆ, ಯುದ್ಧ ವಿಮಾನ ಹಾಗೂ ಜಲಾಂತರ್ಗಾಮಿ ನೌಕೆಗಳಿಂದಲೂ ಬ್ರಹ್ಮೋಸ್‌ ಕ್ಷಿಪಣಿಯನ್ನು ಉಡಾವಣೆಗೊಳಿಸಬಹುದಾಗಿದ್ದು, ಭಾರತ ಮತ್ತು ರಷ್ಯಾ ಜಂಟಿ ಉದ್ಯಮವಾದ ಬ್ರಹ್ಮೋಸ್‌ ಏರೋಸ್ಪೇಸ್‌ ಲಿಮಿಟೆಡ್‌ ಈ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದೆ. ಬ್ರಹ್ಮೋಸ್‌ 2.8 ಮ್ಯಾಕ್‌ ಅಥವಾ ಶಬ್ದದ ವೇಗಕ್ಕಿಂತಲೂ 3 ಪಟ್ಟು ಹೆಚ್ಚಿನ ವೇಗದಲ್ಲಿ ಕ್ರಮಿಸಬಲ್ಲ ಕ್ಷಿಪಣಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!