Monday, October 20, 2025

ಆಪರೇಷನ್ ಸಿಂದೂರ್​​ ನಲ್ಲಿ ‘ಬ್ರಹ್ಮೋಸ್’ ಪ್ರಮುಖ ಆಕ್ರಮಣಕಾರಿ ಅಸ್ತ್ರ; DRDO ಮುಖ್ಯಸ್ಥ ಸಮೀರ್ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಯು ಆಪರೇಷನ್ ಸಿಂಧೂರ್‌ನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಧ್ಯಕ್ಷ ಸಮೀರ್ ವಿ. ಕಾಮತ್ ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಮೂಲಕ ಭಾರತವು ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ನಾಶಪಡಿಸಿದ್ದಷ್ಟೇ ಅಲ್ಲದೆ ತನ್ನ ಸ್ಥಳೀಯ ತಂತ್ರಜ್ಞಾನದ ಮೂಲಕ ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಹೇಗೆ ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಭಾರತವು ತನ್ನ ಸ್ಥಳೀಯ ತಂತ್ರಜ್ಞಾನದಿಂದ ತನ್ನ ಗಡಿಗಳನ್ನು ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಸಂದೇಶವೂ ಆಗಿತ್ತು ಎಂದಿದ್ದಾರೆ.

error: Content is protected !!