ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರೆಜಿಲ್ ನ ಫರ್ನಸ್ ಸರೋವರದಲ್ಲಿ ಮೂರು ಬೋಟ್ ಗಳ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಇದರ ಪರಿಣಾಮ ಸುಮಾರು 7 ಮಂದಿ ಮೃತಪಟ್ಟಿದ್ದಾರೆ.
ಫರ್ನಸ್ ಸರೋವರದಲ್ಲಿ ಹಲವು ಪ್ರವಾಸಿಗರು ದೋಣಿಯಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದು ಈ ಅವಘಡ ಸಂಭವಿಸಿದೆ. ಇದರಿಂದ 7 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಈ ಸರೋವರ ಸಾವೋಪಾಲೋದಿಂದ ಸುಮಾರು 260 ಮೈಲಿ ದೂರದಲ್ಲಿದೆ. ಇದು ಅದ್ಭುತ ಪ್ರವಾಸಿ ತಾಣವಾಗಿದ್ದು, ಈ ದುರಂತದ ನಂತರ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಅಗ್ನಿ ಶಾಮಕದಳ ಸಿಬ್ಬಂದಿ ಕಮಾಂಡರ್ ಕರ್ನಲ್ ಎಡ್ಗಾರ್ಡ್ ಎಸ್ಟೆವೊ ಡಾ ಸಿಲ್ವಾ, ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ, ನೌಕಾಪಡೆ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.