ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಘರ್ಷಣೆ ವೇಳೆ ಪೊಲೀಸರ ಗುಂಡೇಟಿಗೆ 9 ಮಂದಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ. ಪ್ರತಿ ದಾಳಿಯಲ್ಲಿ ಇಬ್ಬರು ಅಧಿಕಾರಿಗಳಿಗೂ ಗಾಯಗಳಾಗಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ರಿಯೊ ಡಿ ಜನೈರೊ ನಗರದಲ್ಲಿ ಗೌರುಜಾ ನಿವಾಸಿಗಳು ಬುಧವಾರ ಬ್ಯಾನರ್ ಹಿಡಿದು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ ವೇಳೆ ಈ ದುರ್ಘಟನೆ ನಡೆದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ 9 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

ಕಳೆದ ವಾರಾಂತ್ಯದಲ್ಲಿ, ಈಶಾನ್ಯ ರಾಜ್ಯ ಬಹಿಯಾದಲ್ಲಿ ಮಾದಕವಸ್ತು ಕಳ್ಳಸಾಗಣೆದಾರರನ್ನು ಗುರಿಯಾಗಿಸಿಕೊಂಡು ಪೊಲೀಸರು ನಡೆಸಿದ ಗುಂಡಿನ ಚಕಮಕಿಯಲ್ಲಿ 19 ಜನರು ಸಾವನ್ನಪ್ಪಿದ್ದರು. ಆ ಘಟನೆ ಮರೆಯುವ ಮುನ್ನವೇ ಮತ್ತೊಂದು ಅನಾಹುತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!