ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ವೇಳೆ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಬೈಕ್ ರ್ಯಾಲಿಯೊಂದರಲ್ಲಿ ಪಾಲ್ಗೊಂಡ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸನಾರೋ ಅವರಿಗೆ ಅಲ್ಲಿನ ಸರ್ಕಾರ ದಂಡ ವಿಧಿಸಿದೆ.
ಸಾವೋ ಪೌಲೋದಲ್ಲಿ ಬೊಲ್ಸನಾರೋ ಪಾಲ್ಗೊಂಡಿದ್ದ ಮೋಟಾರ್ ಸೈಕಲ್ ರ್ಯಾಲಿಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದು, ಈ ವೇಳೆ ಮಾರ್ಗಸೂಚಿಗಳ ಪಾಲನೆ ಮಾಡಿರಲಿಲ್ಲ.
ಜೊತೆಗೆ ಜೈರ್ ಬೊಲ್ಸನಾರೋ ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸಿದ್ದು, ಮಾಸ್ಕ್ ಧರಿಸಿರಲಿಲ್ಲ. ಅವರ ಜೊತೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದವರೂ ಕೂಡಾ ಮಾರ್ಗಸೂಚಿ ಪಾಲನೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ನೂರು ಡಾಲರ್ ದಂಡ ವಿಧಿಸಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.