March 24, 2026
Tuesday, March 24, 2026
spot_img

ಮಲೆ ಮಹದೇಶ್ವರ ಬೆಟ್ಟಕ್ಕೆ ಇನ್ಮುಂದೆ ರಾತ್ರಿ ಪಾದಯಾತ್ರೆಗೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಇನ್ಮುಂದೆ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ನಿಷೇಧ ಹೇರಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆಗೆ ಭಕ್ತ ಪ್ರವೀಣ್ ಬಲಿ ಪ್ರಕರಣದಿಂದಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಿದೆ.

ಇನ್ಮುಂದೆ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ. ಅದರಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇನ್ಮುಂದೆ ರಾತ್ರಿ ವೇಳೆ ಪಾದಯಾತ್ರೆ ಬಂದ್ ಮಾಡಲಾಗಿದೆ.

ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ಮಾಡೋದಕ್ಕೆ ನಿರ್ಬಂಧ ಹೇರಲಾಗಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !